ಒಂದೇ ಕುಟುಂಬದ ನಾಲ್ವರನ್ನು ಕೊಂದ ಹಂತಕ ಕೊನೆಗೂ ಅರೆಸ್ಟ್

ಉಡುಪಿ, ನ.14: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ಏರ್ ಏರ್ಪೋರ್ಟ್ ಸೆಕ್ಯೂರಿಟಿಯಲ್ಲಿಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್‌ ಪಿಎಫ್‌ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ.

ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ನವೆಂಬರ್ 12ರಂದು ನೇಜಾರಿನ ತೃಪ್ತಿ ಲೇಔಟ್‌ ನಲ್ಲಿರುವ ಮನೆಗೆ ಬಂದು ತಾಯಿ ಮೂವರು ಮಕ್ಕಳನ್ನು ಕೊಲೆ ಮಾಡಿದ್ದ.

ಬುಧವಾರ ಈ ಬಗ್ಗೆ ಪೊಲೀಸರು ಸಂಪೂರ್ಣ ಮಾಹಿತಿ ನೀಡುವ ಸಾಧ್ಯತೆಯಿದೆ.

You cannot copy content from Baravanige News

Scroll to Top