ಬೆಂಗಳೂರು : ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರ ಪದಗ್ರಹಣವಾಗಿದೆ.
ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ವಿಜಯೇಂದ್ರ ಅವರಿಗೆ ಬಿಜೆಪಿ ಬಾವುಟ ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರ ಮಾಡಿದ್ದಾರೆ.
ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ 11ನೇ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಅಧಿಕಾರ ಹಸ್ತಾಂತರಿಸಿದ ವಿಜಯೇಂದ್ರರನ್ನು ಸನ್ಮಾನಿಸಿದ ನಳಿನ್ ಕುಮಾರ್ ಕಟೀಲ್ ಅವರು ಅಪ್ಪಿಕೊಂಡು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.
ವಿಜಯೇಂದ್ರ ಅವರ ಪದಗ್ರಹಣದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಗೆ ಘಟಾನುಘಟಿ ನಾಯಕರ ದಂಡೇ ಹರಿದು ಬಂದಿದೆ. ಎಲ್ಲಾ ನಾಯಕರು ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.