ಉಡುಪಿ : ನಾಲ್ವರ ಹತ್ಯೆ ಪ್ರಕರಣ : ಆರೋಪಿ ಮಹಜರು ವೇಳೆ ಸ್ಥಳೀಯರ ಆಕ್ರೋಶ : ಲಾಠಿ ಪ್ರಹಾರ

ಉಡುಪಿ : ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಕರೆ ತಂದಾಗ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಉದ್ರಿಕ್ತ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಹತ್ಯೆ ನಡೆದ ಮನೆಗೆ ಬಂಧಿತ ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ್ ಚೌಗಲೆ (39) ಯನ್ನು ಪೊಲೀಸರು ಸ್ಥಳ
ಮಹಜರಿಗೆ ಬಿಗಿ ಭದ್ರತೆಯ ನಡುವೆ ಕರೆ ತಂದಿದ್ದಾರೆ.

ಈ ವೇಳೆ ಜಮಾಯಿಸಿದ್ದ ಸ್ಥಳೀಯರು ಆರೋಪಿ ವಿರುದ್ಧ ಆಕ್ರೋಶ ಹೊರ ಹಾಕಿ ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ನಾವು ಶಿಕ್ಷೆ ಕೊಡುತ್ತೇವೆ ಎಂದು ಘೋಷಣೆ ಕೂಗಿದ್ದಾರೆ. ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಆತ 15 ನಿಮಿಷ ತೆಗೆದುಕೊಂಡಿದ್ದಾನೆ ನಮಗೆ 30 ಸೆಕೆಂಡು ಅವನನ್ನು ಕೊಡಿ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದರು.

ತೃಪ್ತಿ ನಗರದಲ್ಲಿ ಪೊಲೀಸರ ವಿರುದ್ಧ ಸಾರ್ವಜನಿಕರ ಧಿಕ್ಕಾರ ಕೂಗಿದರು. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಜನಾಕ್ರೋಶದ ನಡುವೆ ಮಹಜರು ಮುಗಿಸಿ ಆರೋಪಿಯನ್ನು ಕರೆದುಕೊಂಡು ಹೋಗಲಾಯಿತು. ಸ್ಥಳಕ್ಕೆ ಎಸ್.ಪಿ, ಡಿ.ಸಿ ಬರಬೇಕು ಎಂದು ಆಗ್ರಹಿಸಿ ರಸ್ತೆ ತಡೆ ಮೂಲಕ ಸಾರ್ವಜನಿಕರು ಪ್ರತಿಭಟಿಸಿದರು.

ನಿನ್ನೆ ಪ್ರವೀಣ್ ಚೌಗಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು, ನ್ಯಾಯಾಲಯ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

You cannot copy content from Baravanige News

Scroll to Top