ದಾವಣಗೆರೆ : ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿ ಜೈಲು ಸೇರಿದ್ದ ಮುರುಘಾ ಶ್ರೀ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಜೈಲಿನಿಂದ ಬಿಡುಗಡೆಯಾಗಿ ಚಿತ್ರದುರ್ಗದಿಂದ ದಾವಣಗೆರೆಗೆ ಬಂದರು.
ದಾವಣಗೆರೆಯ ಶಿವಯೋಗಿ ಮಂದಿರದಲ್ಲಿ ಜಯದೇವ ಮುರುಘರಾಜೇಂದ್ರ ಸ್ವಾಮಿ ಹಾಗೂ ಅಥಣಿ ಮುರುಘೇಂದ್ರ ಶಿವಯೋಗಿಗಳ ಗದ್ದುಗೆಗೆ ಭೇಟಿ ನೀಡಿ ನಮಿಸಿದರು. ಬಳಿಕ ಸುದ್ದಿಗಾರರೊಂದಿ ಮಾತನಾಡಿ, ವಿಚಾರಣೆ ನ್ಯಾಯಾಲಯದಲ್ಲಿ ಇರುವುದರಿಂದ ನಾನು ಏನು ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನು ಮುಂದೆ ಒಳ್ಳೆಯದು ಮಾಡೋಣ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು ಎಂದು ಮೌನಕ್ಕೆ ಜಾರಿದರು.
13 ತಿಂಗಳ ನಂತರ ಜೈಲಿನಿಂದ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಬಿಡುಗಡೆ
