ಹಿಂದೂ ಕಾರ್ಯಕರ್ತರ ಗಡಿಪಾರು ಒಪ್ಪತಕ್ಕ ಮಾತಲ್ಲ – ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟನೆಗಳ ಐವರನ್ನು ಗಡಿಪಾರು ಮಾಡಲು ನೋಟಿ ಜಾರಿ ಮಾಡಿದ್ದರ ಬಗ್ಗೆ ಉಡುಪಿ ಪೇಜಾವರ ಮಠಾಧೀಶರು ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ.



ಮಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹಿಂದೂ ಕಾರ್ಯಕರ್ತರ ಗಡಿಪಾರು ಒಪ್ಪತಕ್ಕಂತ ಮಾತಲ್ಲ ಮತ್ತು ಅಂತಹ ವಿಚಾರಗಳು ನಡೆಯಬಾರದು,ಸರ್ಕಾರ ಎಲ್ಲರಿಗೂ ಸಂಬಂಧಪಟ್ಟದ್ದು ಮತ್ತು ಸರ್ಕಾರಕ್ಕೆ ಎಲ್ಲರೂ ಸಮಾನರು. ಒಂದು ಗುಂಪು ಟಾರ್ಗೆಟ್ ಮಾಡಿದ್ರೆ ಅದು ಶೋಭೆ ತರುವಂತಹದು ಅಲ್ಲವೆಂದು ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ವಿಜಯೇಂದ್ರ ನೇಮಕ ವಿಚಾರವಾಗಿ ಪ್ರತಿಕ್ರೀಯಿಸಿದ ಸ್ವಾಮೀಜಿ ಸರ್ಕಾರ ಇರಬೇಕಾದರೆ ಪ್ರತಿಪಕ್ಷ ಪ್ರಬಲವಾಗಿರಬೇಕು, ನಾಯಕನಿಲ್ಲದೆ ಪ್ರತಿಪಕ್ಷ ಕುಂಠಿತವಾಗಿತ್ತು ಆದ್ರೆ ಈಗ ಸಮರ್ಥ ನಾಯಕ ಬಂದಿದ್ದು ರಾಜ್ಯದ ಅಭಿವೃದ್ಧಿಗೆ ಪೂರಕವಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Scroll to Top