Monday, July 15, 2024
Homeಸುದ್ದಿರಾಜ್ಯHSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಗಡುವು ವಿಸ್ತರಿಸಿದ ಸರ್ಕಾರ, ಏನಿದು ಹೊಸ ಫಲಕ?

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಗಡುವು ವಿಸ್ತರಿಸಿದ ಸರ್ಕಾರ, ಏನಿದು ಹೊಸ ಫಲಕ?

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ ಗಡುವನ್ನು ಮೂರು ತಿಂಗಳಿಗೆ ವಿಸ್ತರಣೆ ಮಾಡಿದೆ.

ನವೆಂಬರ್ 17ಕ್ಕೆ ಅಂತ್ಯವಾಗಬೇಕಿದ್ದ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅವಧಿಯನ್ನು ಇದದೀಗ ಫೆಬ್ರವರಿ 17ರ ವರೆಗೆ ವಿಸ್ತರಣೆ ಮಾಡಿದೆ. ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ. 90 ದಿನಗಳ ಕಾಲಾವಕಾಶವನ್ನು ಸರ್ಕಾರ ಕಲ್ಪಿಸಿದ್ದು, ಎಲ್ಲರೂ ಆದಷ್ಟು ಬೇಗ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಹಾಕುವಂತೆ ಮನವಿ ಮಾಡಿದ್ದಾರೆ.

2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು 90 ದಿನಗಳಲ್ಲಿ ಎಚ್‌ಎಸ್‌ಆರ್‌ಪಿ ಫಲಕ ಹೊಂದಬೇಕು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೆಲ ಗೊಂದಲ, ಅವಧಿ ವಿಸ್ತರಣೆ ಬಳಿಕ ನವೆಂಬರ್ 17, 2023 ಕೊನೆಯ ದಿನಾಂಕ ನೀಡಲಾಗಿತ್ತು. ಇದರ ನಡುವೆ ಕೋರ್ಟ್‌ನಲ್ಲಿ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಗಡುವು ವಿಸ್ತರಿಸಲು ರಾಜ್ಯಕ್ಕೆ ಸೂಚನೆ ನೀಡಿತ್ತು. ಇದರಂತೆ ಸಾರಿಗೆ ಇಲಾಖೆ 90 ದಿನಗಳಿಗೆ ಮತ್ತೆ ಅವಧಿ ವಿಸ್ತರಣೆ ಮಾಡಿದೆ.

2019ರ ಎಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ 2 ಕೋಟಿ ವಾಹನಗಳ ಪೈಕಿ ಕೇವಲ 2.6 ಲಕ್ಷ ವಾಹನಗಳು ಮಾತ್ರ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಹಾಕಲಾಗಿದೆ. ಇನ್ನುಳಿದ ವಾಹನಗಳು ಇನ್ನೂ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಹಾಕಿಲ್ಲ. ಇನ್ನು 90 ದಿನಗಳಲ್ಲಿ ಈ ವಾಹನಗಳು ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಹಾಕಬೇಕಿದೆ.

ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್, ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್(HSRP). ಅತೀ ಸುರಕ್ಷಿತ ನಂಬರ್ ಪ್ಲೇಟ್ ಕರ್ನಾಟಕದಲ್ಲಿನ ವಾಹನಕ್ಕೆ ಕಡ್ಡಾಯ ಮಾಡಲಾಗಿದೆ. ಎಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಅಪ್ಡೇಟ್‌, ಸಾಮರ್ಥ್ಯ ಅನುಮೋದನೆ ಇತ್ಯಾದಿ ಸಾಧ್ಯವಿಲ್ಲ. ಎಚ್‌ಎಸ್‌ಆರ್‌ಪಿ ನಂಬರ್‌ ಅಳವಡಿಕೆ ಮಾಡಿಕೊಂಡ ಮಾಹಿತಿಯನ್ನು ವಾಹನ್‌ ತಂತ್ರಾಂಶದಲ್ಲಿ ಮಾಲೀಕರ ಮಾಹಿತಿ ಲಭ್ಯವಾಗುತ್ತದೆ. ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಇದು ಸಹಾಯಕವಾಗಲಿದೆ.

‘ಮೋಟಾರು ವಾಹನ ಕಾಯ್ದೆ-1989’ರ ಸೆಕ್ಷನ್‌ 50 ಮತ್ತು 51ರಂತೆ ಎಲ್ಲ ವಾಹನಗಳಿಗೆ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಗರಿಷ್ಠ ಭದ್ರತೆಯ (ಹೈ ಸೆಕ್ಯೂರಿಟಿ) ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕು. ಈ ಬಗ್ಗೆ 2018ರಲ್ಲಿ ಸುಪ್ರೀಂಕೋರ್ಟ್‌ ಹಾಗೂ ಕೇಂದ್ರ ಸರ್ಕಾರ ಆದೇಶ ಹೊರಡಿಸಿವೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News