ಡೀಪ್‌ ಫೇಕ್‌ ಸಮಾಜದಲ್ಲಿ ಅವ್ಯವಸ್ಥೆಯನ್ನು ಉಂಟು ಮಾಡಬಹುದು; ಪ್ರಧಾನಿ ಮೋದಿ ಕಳವಳ

ನವದೆಹಲಿ, ನ 17: ಡೀಪ್‌ ಫೇಕ್‌ ಗಳು ಸಮಾಜದಲ್ಲಿ ಅವ್ಯವಸ್ಥೆಯನ್ನುಂಟು ಮಾಡಬಹುದು. ಹೆಚ್ಚುತ್ತಿರುವ ಸಮಸ್ಯೆಯ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದರು.

ಬಿಜೆಪಿಯ ಪ್ರಧಾನ ಕಛೇರಿಯಲ್ಲಿ ದೀಪಾವಳಿ ಮಿಲನ್ ಕಾರ್ಯಕ್ರಮದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಡೀಪ್‌ ಫೇಕ್‌ ಗಳು ಪ್ರಸ್ತುತ ಭಾರತೀಯ ವ್ಯವಸ್ಥೆಯು ಎದುರಿಸುತ್ತಿರುವ ದೊಡ್ಡ ಬೆದರಿಕೆಗಳಲ್ಲಿ ಒಂದಾಗಿದೆ.
ಡೀಪ್‌ ಫೇಕ್‌ ಗಳಿಗಾಗಿ ’ಎಐ’ ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳುವಾಗ ನಾಗರಿಕರು ಹಾಗೂ ಮಾಧ್ಯಮಗಳು ಬಹಳ ಜಾಗರೂಕರಾಗಿರಬೇಕು ಎಂದು ಸಲಹೆ ನೀಡಿದರು.
ಇದೇ ರೀತಿ ಮೋದಿ ಅವರು ಗರ್ಬಾ ನೃತ್ಯ ಮಾಡುವ ವಿಡಿಯೋವೊಂದು ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಪ್ರಧಾನಿಯನ್ನು ಹೋಲುವ ವ್ಯಕ್ತಿಯೋರ್ವರು ಕೆಲ ಮಹಿಳೆಯರೊಂದಿಗೆ ನೃತ್ಯ ಮಾಡುತ್ತಿದ್ದು, ಈ ವ್ಯಕ್ತಿಯು ನಟ ವಿಕಾಸ್ ಮಹಂತೆ ಎಂದು ತಿಳಿದು ಬಂದಿದೆ.
ಇನ್ನು ವೈರಲ್ ಆದ ವಿಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಚಿಕ್ಕ ವಯಸ್ಸಿನಿಂದಲೂ ಗರ್ಬಾ ನೃತ್ಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

You cannot copy content from Baravanige News

Scroll to Top