ಬೆಂಗಳೂರು, ನ 17 : ಬಿಜೆಪಿ ಪಕ್ಷದಿಂದ ವಿಪಕ್ಷದ ನಾಯಕನಾಗಿ ಆರ್ .ಅಶೋಕ್ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜಾಧ್ಯಕ್ಷ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ,ಅಳೆದು ತೂಗಿ ಆಯ್ಕೆ ಮಾಡಲಾಗಿದೆ.
ಈ ಮೂಲಕ ಕಳೆದ ಹಲವಾರು ದಿನಗಳಿಂದ ಚರ್ಚೆಗೆ ಕಾರಣವಾದ ಪ್ರತಿ ಪಕ್ಷದ ನಾಯಕ ಆಯ್ಕೆ ಆಗುವ ಮೂಲಕ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.
ಇದಕ್ಕೂ ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಅಸಮಧಾನ ಸ್ಫೋಟಗೊಂಡಿದ್ದು ಸಭೆಗೂ ಮುನ್ನವೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಸಭೆಯಿಂದ ಹೊರ ನಡೆದಿದ್ದಾರೆ.