ಮಲಯಾಳಂ ನಟ ಕಾರಿನೊಳಗೆ ಶವವಾಗಿ ಪತ್ತೆ

ಕೊಟ್ಟಾಯಂ, ನ 19: ಮಲಯಾಳಂ ನಟ ವಿನೋದ್ ಥಾಮಸ್ ಕೋಟ್ಟಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಹೊಟೇಲ್‌ ಆವರಣದಲ್ಲಿ ತುಂಬಾ ಸಮಯ ಪಾರ್ಕ್‌ ಮಾಡಿದ್ದ ಕಾರೊನೊಳಗೆ ನಟನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಕಾರಿನ ಎಸಿಯಿಂದ ವಿಷಕಾರಿ ಅನಿಲವನ್ನು ಉಸಿರಾಡಿದ್ದರಿಂದ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.ಆದರೆ, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿನ ಕುರಿತು ಖಚಿತ ಮಾಹಿತಿ ದೊರೆಯಲಿದೆ.

You cannot copy content from Baravanige News

Scroll to Top