ಉಡುಪಿ : ಜಿಲ್ಲಾಧಿಕಾರಿ ವಿದ್ಯಾಕುಮಾರಿ ಐಎಎಸ್ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್ ಕ್ರಿಯೆಟ್ ಮಾಡಿ ಹಣಕ್ಕಾಗಿ ಮೆಸೆಜ್ ಗಳನ್ನು ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಯವರು ಈ ರೀತಿಯ ಮೆಸೆಜ್ ಬಂದರೆ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿರುವ ಅವರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು, ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ಕೇಳುತ್ತಿರುವ ಘಟನೆಗಳು ನಡೆಯುತ್ತಿದ್ದು, (Dr K VidyaKumari IAS,DC) ಎಂದು Whatsapp ನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿ ಸಂದೇಶಗಳನ್ನು ಕಳುಹಿಸುತ್ತಿರುವುದು ಹಾಗೂ ಹಣ ಕೇಳುತ್ತಿರುವ ವಿಚಾರವು ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಣ ಕೇಳುವ ಸಂದೇಶಗಳು ಸ್ವೀಕೃತವಾದಲ್ಲಿ ಅದಕ್ಕೆ ಸ್ಪಂದಿಸದೇ ಕೂಡಲೇ ಅಗತ್ಯ ಮಾಹಿತಿಯೊಂದಿಗೆ ಸ್ಥಳೀಯ ಠಾಣಾಧಿಕಾರಿಯವರಿಗೆ ದೂರು ನೀಡುವಂತೆ ಕೋರಿದೆ.