ಚಿಕ್ಕಮಗಳೂರು : ಬಿರಿಯಾನಿ ತಿಂದು ಗ್ರಾಮಸ್ಥರು, ಸಂಬಂಧಿಕರು ಆಸ್ಪತ್ರೆಗೆ ಸೇರಿದ ಘಟನೆ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ.
ಒಂದು ದಿನದ ಹಿಂದೆ ಮಾಡಿದ್ದ ಬಿರಿಯಾನಿಯನ್ನು ತಿಂದಿದ್ದ ಗ್ರಾಮದ 17 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿನ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಲಾಗಿತ್ತು.
ಅಸ್ವಸ್ಥರಾದವರನ್ನು ಕಡೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥಗೊಂಡವರಲ್ಲಿ ಮಕ್ಕಳೂ ಕೂಡ ಸೇರಿದ್ದಾರೆ. ಆಸ್ಪತ್ರೆಗೆ ಕಡೂರು ಶಾಸಕ ಕೆ.ಎಸ್.ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.