ವದೆಹಲಿ, ಜೂ. 1: ಹೋಟೆಲ್ಗಳು, ರೆಸ್ಟೋರೆಂಟ್ಗಳು ಮತ್ತು ಇತರೆ ವಾಣಿಜ್ಯ ಉದ್ದೇಶಗಳಿಗೆ ಬಳಸುವ 19 ಕೆಜಿ ಎಲ್ಪಿಜಿ ಸಿಲಿಂಡರ್ಗಳ ದರವನ್ನು ತೈಲ ಮಾರುಕಟ್ಟೆ ಕಂಪನಿಗಳು 42ರೂ ಹೆಚ್ಚಿಸಿವೆ.
ಮೂಲಗಳ ಪ್ರಕಾರ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರ 3,071.50ರಿಂದ 3,113.50ಕ್ಕೆ ಏರಿಕೆಯಾಗಿದೆ.ಇದಕ್ಕೆ ವಿರುದ್ಧವಾಗಿ, ಮನೆಗಳಲ್ಲಿ ಬಳಸುವ 14.2 ಕೆಜಿ ಎಲ್ಪಿಜಿ ಸಿಲಿಂಡರ್ ದರ ಯಥಾಸ್ಥಿತಿಯಲ್ಲೇ ಉಳಿದಿದ್ದು, ದೆಹಲಿಯಲ್ಲಿ ಅದರ ಬೆಲೆ 913 ಆಗಿದೆ.
ವಾಣಿಜ್ಯ ಸಿಲಿಂಡರ್ ದರ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ಸೇವಾ ಕ್ಷೇತ್ರಗಳ ಕಾರ್ಯಾಚರಣಾ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೆ ತೈಲ ಬೆಲೆ ಹೆಚ್ಚಳದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಈ ನಡುವೆ ವಾಣಿಜ್ಯಸಿಲಿಂಡರ್ಗಳ ದರ ಸೇವಾ ವಲಯಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ.



