ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ; ನೀರನ್ನು ಮಿತವಾಗಿ ಬಳಸುವಂತೆ ನಗರಸಭೆ ಮನವಿ

ಉಡುಪಿ(ಮಾ.15): ಬೇಸಿಗೆ ಸಂಪೂರ್ಣವಾಗಿ ಪ್ರಾರಂಭವಾಗುವ ಮುನ್ನವೇ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೋರಿದೆ.

ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣ ನದಿಯ ಬಜೆ ಡ್ಯಾಂ ನಲ್ಲಿ ನೀರಿನ ಸಂಗ್ರಹ ಅತೀ ಕಡಿಮೆಯಾಗಿದ್ದು, ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸದೇ ಜೀವ ಜಲ ನೀರಿನ ಸಂರಕ್ಷಣ ಹಾಗೂ ಮಿತವಾದ ಬಳಕೆಗೆ ಆದ್ಯತೆ ನೀಡಿ ನೀರಿನ ಅಭಾವ ಇರುವ ಈ ಸಮಯದಲ್ಲಿ ನಗರಸಭೆಯೊಂದಿಗೆ ಸಹಕರಿಸಬೇಕಾಗಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ

You cannot copy content from Baravanige News

Scroll to Top