ಉಡುಪಿ: ಅವಧಿ ಮುಗಿದ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿಂಗ್ಸ್ ಹಾಗೂ ಕಟೌಟ್‌ಗಳ ತೆರವಿಗೆ ನಾಳೆ ಕೊನೆಯ ದಿನ

ಉಡುಪಿ, ಮಾ.23: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ -2023ರ ಪ್ರಯುಕ್ತ ಉಡುಪಿ ನಗರಸಭೆಯಿಂದ ಅನುಮತಿ ನೀಡಿ ಅವಧಿ ಮುಗಿದಿರುವ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿಂಗ್ಸ್ ಹಾಗೂ ಕಟೌಟ್‌ಗಳನ್ನು ಮಾರ್ಚ್ 24 ರ ಒಳಗೆ ತೆರವುಗೊಳಿಸಬೇಕು.

ಕಾರ್ಯಕ್ರಮ ನಡೆಸಲು ಹಾಗೂ ಬ್ಯಾನರ್ ಮತ್ತು ಕಟೌಟ್‌ಗಳನ್ನು ಅಳವಡಿಸಲು ನಗರಸಭೆಯಿಂದ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ಸದರಿ ಬ್ಯಾನರ್, ಬಂಟಿಂಗ್ಸ್ ಹಾಗೂ ಹೋರ್ಡಿಂಗ್ನಳನ್ನು ಅನಧಿಕೃತವೆಂದು ಪರಿಗಣಿಸಿ, ನಗರಸಭೆಯಿಂದ ತೆರವುಗೊಳಿಸಲಾಗುವುದು ಎಂದು ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

You cannot copy content from Baravanige News

Scroll to Top