ಮುಂಗಾರು ಆಗಮನಕ್ಕೆ ಕ್ಷಣಗಣನೆ; ಮುಂದಿನ ಎರಡು ದಿನ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು, ಜೂ 04: ರಾಜ್ಯದಲ್ಲಿ ಬಹುತೇಕ ಕಡೆ ಮುಂದಿನ ಎರಡು ದಿನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

You cannot copy content from Baravanige News

Scroll to Top