ಪಕ್ಷ ವಿರೋಧಿ ಹೇಳಿಕೆ ನೀಡಿದ 11 ಜನರಿಗೆ ನೋಟಿಸ್ – ಕಟೀಲ್

ಬೆಂಗಳೂರು : ಪಕ್ಷ ವಿರೋಧಿ ಹೇಳಿಕೆ ನೀಡಿರುವ 11 ಜನರಿಗೆ ನೋಟಿಸ್ ನೀಡಿದ್ದೇವೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆಯನ್ನು ಚುನಾವಣೆ ಸಂದರ್ಭದಲ್ಲಿ ನಡೆಸಿದ್ದು, ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧಾರ ಕೈಗೊಂಡಿದ್ದೇವೆ. ಬಹಿರಂಗವಾಗಿ ಹೇಳಿಕೆ ನೀಡಿದವರನ್ನು ಕರೆದು ಮಾತನಾಡಿದ್ದೇವೆ. ಇನ್ಮುಂದೆ ಬಹಿರಂಗ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದೇವೆ ಎಂದರು.

ಇನ್ನು ಬಿಜೆಪಿ ನಾಯಕರಿಂದ ಬಹಿರಂಗ ಹೇಳಿಕೆ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ನಿನ್ನೆ ನೋಟಿಸ್ ಜಾರಿ ಮಾಡಿದೆ.

ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ನೀಡಿರುವುದಾಗಿ ಇನ್ನು ಒಂದು ವಾರದೊಳಗಾಗಿ ಲಿಖಿತ ರೂಪದಲ್ಲಿ ಇದಕ್ಕೆ ಉತ್ತರ ನೀಡುವಂತೆ ಸೂಚಿಸಲಾಗಿದೆ.

You cannot copy content from Baravanige News

Scroll to Top