ಕರಾವಳಿ ಜಿಲ್ಲೆಗಳಲ್ಲಿ ಸೆ.30ರಿಂದ ಮೂರು ದಿನಗಳ ಕಾಲ ವರುಣನ ಆರ್ಭಟ ಜೋರು : ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ ಎರಡರವರೆಗೂ ಮಳೆಯಾಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಬೀದರ್, ಧಾರವಾಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಅಧಿಕ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಪಣಂಬೂರು,ಕಾರ್ಕಳ, ಕೋಟ, ನರಗುಂದ, ಮಂಗಳೂರು ವಿಮಾನ ನಿಲ್ದಾಣ, ಕಾರವಾರ, ಕ್ಯಾಸಲ್ರಾಕ್, ಗೇರುಸೊಪ್ಪ, ಕುಕನೂರು, ಪುತ್ತೂರು, ಮಾಣಿ, ಬೆಳ್ತಂಗಡಿ, ಕದ್ರಾ, ಗೋಕರ್ಣ, ಶಿರಾಲಿ, ಯಡ್ವಾಡ, ಯಲ್ಲಾಪುರ, ಮಂಕಿ, ಕುಮಟಾ, ಚಿಕ್ಕೋಡಿ, ಕಲಘಟಗಿ, ಮಹಾಲಿಂಗಪುರ, ಹುಣಸೂರು, ಮಂಚಿಕೆರೆ, ಸುಳ್ಯ, ಧರ್ಮಸ್ಥಳ, ಕೊಲ್ಲೂರು, ಕುಂದಾಪುರ, ಹೊನ್ನಾವರ, ಹುಕ್ಕೇರಿ, ಗೋಕಾಕ್, ಚಿಂಚೋಳಿ, ಕೊಟ್ಟಿಗೆಹಾರ, ಎಲೆಕ್ಟ್ರಾನಿಕ್ ಸಿಟಿ, ಭಾಗಮಂಡಲ, ಕುಡತಿನಿಯಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಎಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

You cannot copy content from Baravanige News

Scroll to Top