ಅನಂತಪುರ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ; ಭಕ್ತರಲ್ಲಿ ಅಚ್ಚರಿ

ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಸಸ್ಯಹಾರಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ. ಇದು ಭಕ್ತರಲ್ಲಿ ಅಚ್ಚರಿಗೆ ಕಾರಣವಾಗಿದೆ.

ಕುಂಬಳೆ ಸಮೀಪದ ಅನಂತಪುರ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬ್ರಿಟೀಷರ ಗುಂಡೇಟಿಗೆ ಬಲಿಯಾಗಿದ್ದ ಮೊಸಳೆ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿತ್ತು. ದೇವಸ್ಥಾನದ ಕಲ್ಯಾಣಿಯಲ್ಲಿ ದೇವಮೊಸಳೆ ಅಂತಾನೆ ಇತಿಹಾಸ ಹೊಂದಿದ್ದ ಈ ಬಬಿಯಾ ಎನ್ನುವ ಮೊಸಳೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿತ್ತು. ಆದರೆ, 2022ರ ಅಕ್ಟೋಬರ್ 9 ರಂದು ಇದು ಮೃತಪಟ್ಟಿತ್ತು.

ಬಬಿಯಾ ಮೃತಪಟ್ಟು ಒಂದು ವರ್ಷ ಒಂದು ತಿಂಗಳ ಬಳಿಕ ಸದೃಢ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಇದು ಭಕ್ತರಲ್ಲಿ ಭಾರೀ ಅಚ್ಚರಿಗೆ ಕಾರಣವಾಗಿದೆ.

You cannot copy content from Baravanige News

Scroll to Top